Home ಕರ್ನಾಟಕ ಅಯೋಧ್ಯೆ ಮಧ್ಯೆ ಸಂಚರಿಸುವ ವಿಮಾನಕ್ಕೆ ಬಾಂಬ್​ ಬೆದರಿಕೆ: ಎಮರ್ಜೆನ್ಸಿ ಲ್ಯಾಂಡಿಂಗ್!

ಅಯೋಧ್ಯೆ ಮಧ್ಯೆ ಸಂಚರಿಸುವ ವಿಮಾನಕ್ಕೆ ಬಾಂಬ್​ ಬೆದರಿಕೆ: ಎಮರ್ಜೆನ್ಸಿ ಲ್ಯಾಂಡಿಂಗ್!

0
ಅಯೋಧ್ಯೆ ಮಧ್ಯೆ ಸಂಚರಿಸುವ ವಿಮಾನಕ್ಕೆ ಬಾಂಬ್​ ಬೆದರಿಕೆ: ಎಮರ್ಜೆನ್ಸಿ ಲ್ಯಾಂಡಿಂಗ್!

ಅಯೋಧ್ಯೆ, ಅಕ್ಟೋಬರ್​ 28: ಬೆಂಗಳೂರಿನಿಂದ ಅಯೋಧ್ಯೆಗೆ (Bangaluru-Ayodhya Flight) ಸಂಚರಿಸುವ ವಿಮಾನಕ್ಕೆ ಬಾಂಬ್‌ ಬೆದರಿಕೆ ಹಿನ್ನೆಲೆಯಲ್ಲಿ ಅಯೋಧ್ಯೆ ವಾಲ್ಮೀಕಿ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್‌ ಮಾಡಲಾಗಿದೆ.

ವಿಮಾನದಲ್ಲಿ ಪರಿಶೀಲನೆ ಬಳಿಕ ಯಾವುದೇ ಬಾಂಬ್ ಪತ್ತೆಯಾಗದ ಹಿನ್ನೆಲೆ ಹುಸಿಬಾಂಬ್‌ ಎಂದು ಅಯೋಧ್ಯೆ ಏರ್‌ಪೋರ್ಟ್ ನಿರ್ದೇಶಕ ವಿನೋದ್ ಕುಮಾರ್​ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಟು ಅಯೋಧ್ಯೆಗೆ 173 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಕಾಶ ಏರ್‌ಲೈನ್ಸ್​ಗೆ ಹುಸಿಬಾಂಬ್​ ಬೆದರಿಕೆ ಬಂದಿದೆ. ತಕ್ಷಣ ತುರ್ತು ಭೂಸ್ಪರ್ಶ ಮಾಡಿ ಒಟ್ಟು ಪ್ರಯಾಣಿಕರನ್ನು ಪ್ರಾಣಾಪಾಯದಿಂದ ಪಾರು ಮಾಡಲಾಗಿದೆ.

LEAVE A REPLY

Please enter your comment!
Please enter your name here