
ಬೆಂಗಳೂರು, ನವೆಂಬರ್ 20: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಫೆಡರೇಷನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ಕರ್ನಾಟಕ ನಾಳೆ ಕರೆ ನೀಡಿದ್ದ ಮದ್ಯ ಮಾರಾಟ ಬಂದ್ ಕರೆಯನ್ನು ವಾಪಸ್ ಪಡೆದುಕೊಂಡಿದೆ.
ಸಿಎಂ ಸಿದ್ದರಾಮಯ್ಯ ಸಂಘದ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಹಿನ್ನೆಲೆ ಈ ನಿರ್ಧಾರ ಕೈಗೊಂಡಿದ್ದಾರೆ.ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಸೇರಿದಂತೆ ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಸೋಸಿಯೇಷನ್ ಒಂದು ದಿನ ಪ್ರತಿಭಟನೆ ನಡೆಸಲು ಮಂದಾಗಿತ್ತು.
ಬಂದ್‌ಗೂ ಮುನ್ನಾ ದಿನವಾದ ಇಂದು ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಂಘದ ಸದಸ್ಯರನ್ನು ಭೇಟಿಯಾಗಿ ಸಿದ್ದರಾಮಯ್ಯ ಮಾತುಕತೆ ನಡೆಸಿದರು.