
ಬೆಳಗಾವಿ: ರಮೇಶ್ ಕತ್ತಿ ರಾಜೀನಾಮೆ ಹಿನ್ನಲೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಡಿಸಿಸಿ ಬ್ಯಾಂಕ್ ಪಾಲಿಟಿಕ್ಸ್ ಗೆ ಇನ್ನೇನು ಕೆಲವೇ ಹೊತ್ತಿನಲ್ಲಿ ತೆರೆ ಬೀಳಲಿದೆ.
ಇಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಜರುಗಲಿದ್ದು, ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ರಮೇಶ್ ಜಾರಕಿಹೊಳಿ ಪ್ರಭಾಕರ ಕೋರೆ ಮೊದಲಾದ ಹಿರಿಯ ನಾಯಕರು ವಿಸ್ತೃತವಾಗಿ ಚರ್ಚಿಸಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಹೆಸರು ಸೂಚಿಸಲಿದ್ದು, ನಂತರ ನಾಮಪತ್ರ ಸಲ್ಲಿಸಿ ಅವಿರೋಧ ಆಯ್ಕೆ ಪ್ರಕ್ರಿಯೆ ಜರುಗಲಿದೆ.
ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಅರವಿಂದ ಪಾಟೀಲ ಅವರು ಹೆಸರು ಸೂಚಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ಈ ಮಧ್ಯೆ ಚಿಕ್ಕೋಡಿಗೆ ಅಧ್ಯಕ್ಷ ಸ್ಥಾನ ಬೆಳಗಾವಿ ಭಾಗಕ್ಕೆ ಉಪಾಧ್ಯಕ್ಷ ಸ್ಥಾನ ಮೀಸಲಿಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಅವರು ಹೆಸರು ಮುಂಚೂಣಿಯಲ್ಲಿದ್ದು, ಇನ್ನೇನು ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ.