
ಬೆಂಗಳೂರು, ಡಿಸೆಂಬರ್ 02: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ನಟ ದರ್ಶನ್ ಆಸ್ಪತ್ರೆ ಮಂಚದ ಮೇಲೆ ಮಲಗಿರುವ ಫೋಟೋ ವೈರಲ್ ಆಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ನಂತರ ದರ್ಶನ್ ಅವರಿಗೆ ಅಪಾರವಾದ ಬೆನ್ನು ನೋವು ಕಾಡಿತ್ತು. ಹೀಗಾಗಿ ಅವರಿಗೆ ಚಿಕಿತ್ಸೆ ಪಡೆಯಲು ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಮೊದ ಮೊದಲಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಾ ಬೇಡವಾ ಎಂಬ ಗೊಂದಲದಲ್ಲಿ ನಟ ದರ್ಶನ್ ಇದ್ದರು. ಇದೀಗ ದಿಢೀರ್ ಅಂತ ದರ್ಶನ್ ಆಸ್ಪತ್ರೆಯ ಮಂಚದ ಮೇಲೆ ಮಲಗಿರುವ ಫೋಟೋ ವೈರಲ್ ಆಗಿದೆ.