
ಬೆಂಗಳೂರು: 08: ರಾಜ್ಯದಲ್ಲಿ 6584 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು ಶೇ 80% ರಷ್ಟು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಪ್ರಸ್ತಾವನೆ ಸಲ್ಲಿಸಲು ಸರ್ಕಾರ ಅನುಮೋದನೆ ನೀಡಿದೆ.
ಒಂದರಿಂದ ಎಂಟನೇ ತರಗತಿ ಒಳಗೊಂಡು ಒಟ್ಟು 5267 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಸರ್ಕಾರ ಅನುಮೋದನೆ ನೀಡಿದ್ದು ನೇಮಕಾತಿ ಪೂರ್ವ ಪ್ರಕ್ರಿಯೆ ಕೈಗೊಳ್ಳಲು ಸೂಚಿಸಿದೆ.