
ಬೆಂಗಳೂರು, ನವೆಂಬರ್ 21: ಗುರುವಾರ ಬೆಳ್ಳಂಬೆಳಗ್ಗೆ ರಾಜ್ಯದ ಸುಮಾರು 25 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಠ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.
ಬೆಂಗಳೂರು, ಚಿಕ್ಕಬಳ್ಳಾಪುರ, ಮಂಡ್ಯ, ಮಂಗಳೂರು ಸೇರಿದಂತೆ ಹಲವು ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪ್ರಮುಖ ನಾಲ್ವರು ಅಧಿಕಾರಿಗಳ ಕಚೇರಿ ಹಾಗೂ ನಿವಾಸದಲ್ಲಿ ಶೋಧ ನಡೆಸುತ್ತಿದ್ದಾರೆ.
ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿದ ಒಟ್ಟು 25 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.