Home ಸ್ಥಳೀಯ ಲಕ್ಷ್ಮೀ ಹೆಬ್ಬಾಳಕರ್ ಇಂದು ಡಿಸ್ಚಾರ್ಜ್; ವೈದ್ಯರಿಗೆ ಸಚಿವೆ ಕೃತಜ್ಞತೆ!

ಲಕ್ಷ್ಮೀ ಹೆಬ್ಬಾಳಕರ್ ಇಂದು ಡಿಸ್ಚಾರ್ಜ್; ವೈದ್ಯರಿಗೆ ಸಚಿವೆ ಕೃತಜ್ಞತೆ!

0
ಲಕ್ಷ್ಮೀ ಹೆಬ್ಬಾಳಕರ್  ಇಂದು ಡಿಸ್ಚಾರ್ಜ್; ವೈದ್ಯರಿಗೆ ಸಚಿವೆ ಕೃತಜ್ಞತೆ!

ಬೆಳಗಾವಿ, ಜನವರಿ 26: ರಸ್ತೆ ಅಪಘಾತದಿಂದಾಗಿ ಕಳೆದ 13 ದಿನಗಳಿಂದ ವಿಜಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಇಂದು ಡಿಸ್ಚಾರ್ಜ್ ಮಾಡಲಾಯಿತು.

ಆಸ್ಪತ್ರೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಸ್ತೆ ಅಪಘಾತದಲ್ಲಿ ಬದುಕಿ ಬಂದಿದ್ದು ನನಗೆ ಪುನರ್ಜನ್ಮ ಬಂದಂತಾಗಿದೆ. ವೈದ್ಯರು ಮೂರು ವಾರಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಆದರೆ, ಸಚಿವೆಯಾಗಿ ನನಗೂ ಜವಾಬ್ದಾರಿ ಇದೆ. ಮಾರ್ಚ್ ತಿಂಗಳಲ್ಲಿ ಬಜೆಟ್ ಕೂಡ ಇದೆ. ಮಹಿಳಾ ಮತ್ತು ಮಕ್ಕಳ ಇಲಾಖೆ ಕೂಡ ಚನ್ನಾಗಿ ಕಾರ್ಯನಿರ್ವಹಿಸುತ್ತಿದೆ. ಮೂರು ವಾರ ವಿಶ್ರಾಂತಿ ಹೇಳಿದ್ದಾರೆ. ಆದಷ್ಟು ಬೇಗ ಸಾರ್ವಜನಿಕ ಜೀವನಕ್ಕೆ ಮರಳುತ್ತೇನೆ ಎಂದು ಸಚಿವರು ತಿಳಿಸಿದರು.

ಕಳೆದ 13 ದಿನಗಳಿಂದ ಚಿಕಿತ್ಸೆ ನೀಡಿದ ವಿಜಯ ಆಸ್ಪತ್ರೆ ವೈದ್ಯ ಡಾ. ರವಿ ಪಾಟೀಲ್ ಅವರಿಗೆ ಸಚಿವರು ಕೃತಜ್ಞತೆ ಸಲ್ಲಿಸಿದರು. ಕಳೆದ 13 ದಿನಗಳು ನನಗೆ ಆಸ್ಪತ್ರೆಗಿಂತ ಮನೆಯಂತೆ ಭಾಸವಾಯಿತು. ನನ್ನ ಕುಟುಂಬಕ್ಕಿಂತ ಹೆಚ್ಚಾಗಿ ನನ್ನನ್ನು ನೋಡಿಕೊಂಡರು. ನನ್ನ ಕಷ್ಟದ ಸಮಯದಲ್ಲಿ, ವೈದ್ಯರು ನನ್ನ ಪಕ್ಕದಲ್ಲಿ ನಿಂತು, ಬೆಂಬಲ ಮತ್ತು ಕಾಳಜಿಯನ್ನು ತೋರಿದರು. ವೈದ್ಯರ ದಯೆ, ತಾಳ್ಮೆ ಮತ್ತು ಸಮರ್ಪಣೆ ಹೃದಯಸ್ಪರ್ಶಿಯಾಗಿತ್ತು. ಧೈರ್ಯ ಕಳೆದುಕೊಳ್ಳದಂತೆ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿ ನನ್ನ ಜೊತೆ ನಿಂತರು ಎಂದು ಸಚಿವೆ ಹೆಬ್ಬಾಳಕರ ಹೇಳಿದರು.

LEAVE A REPLY

Please enter your comment!
Please enter your name here