
ಬೆಂಗಳೂರು, ಅಕ್ಟೋಬರ್ 15 : ದಲಿತ ಸಮುದಾಯದ ಗುತ್ತಿಗೆದಾರನಿಗೆ ಬೆದರಿಕೆ, ಜಾತಿನಿಂದನೆ ಪ್ರಕರಣದಲ್ಲಿ ಜೈಲು ಸೇರಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಇದೀಗ ಅತ್ಯಾಚಾರ ಪ್ರಕರಣದಲ್ಲೂ ಬಿಗ್ ರಿಲೀಫ್ ಸಿಕ್ಕಿದೆ.
ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರಿಗೆ ಜಾಮೀನು ನೀಡಿದೆ.
ಮಂಗಳವಾರ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದ ಬೆಂಗಳೂರು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಮುನಿರತ್ನಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದಾರೆ.