Home ಕರ್ನಾಟಕ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ ಆರೋಪದಡಿ ಎಫ್ಐಆರ್

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ ಆರೋಪದಡಿ ಎಫ್ಐಆರ್

0
ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ ಆರೋಪದಡಿ ಎಫ್ಐಆರ್

ಬೆಂಗಳೂರು, ಅಕ್ಟೋಬರ್‌ 09: ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ 34 ವರ್ಷದ ಮಹಿಳೆಯೊಬ್ಬರು ಅತ್ಯಾಚಾರ, ಅಪಹರಣ ಮತ್ತು ಕ್ರಿಮಿನಲ್ ಬೆದರಿಕೆ ಆರೋಪ ಮಾಡಿದ್ದಾರೆ.

ಈ ಸಂಬಂಧ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಧಾರವಾಡದ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್‌ಐಆ‌ರ್ ದಾಖಲಾಗಿದೆ.

ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ವಿನಯ್ ಕುಲಕರ್ಣಿ ಅವರನ್ನು A1 ಆರೋಪಿ ಮತ್ತು ಅವರ ಆಪ್ತ ಸಹಾಯ ಅರ್ಜುನ್ ಅನ್ನು A2 ಆರೋಪಿ ಎಂದು ಹೆಸರಿಸಿ ಎಫ್‌ಐಆ‌ರ್ ದಾಖಲಿಸಿದ್ದಾರೆ.

2022 ರ ಆರಂಭದಲ್ಲಿ ಬೆಂಗಳೂರಿನಲ್ಲಿರುವ ಅವರ ಮನೆಯಲ್ಲಿ ಕುಲಕರ್ಣಿ ಅವರನ್ನು ಭೇಟಿಯಾದರು ಎಂದು ಸಾಮಾಜಿಕ ಕಾರ್ಯಕರ್ತೆ ಎಂದು ಗುರುತಿಸಿಕೊಂಡ ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ .

LEAVE A REPLY

Please enter your comment!
Please enter your name here