
ಚನ್ನಮ್ಮನ ಕಿತ್ತೂರು, ಅಕ್ಟೊಬರ್ 22: ಕಿತ್ತೂರು ವಿಜಯೋತ್ಸವದ 200ನೇ ಸಂಭ್ರಮಾಚರಣೆಗೆ ಕ್ಷಣಗಣನೆ ಶುರುವಾಗಿದೆ.
ಜಿಲ್ಲಾಧಿಕಾರಿ ಮೊಹ್ಮದ ರೋಷನ್ ಹಾಗೂ ಶಾಸಕರು ಕಾರ್ಯಕ್ರಮದ ಮುಖ್ಯ ವೇದಿಕೆಯನ್ನು ಪರಿಶೀಲಿಸಿದರು. ಸಚಿವರು ಶಾಸಕರು ಗಣ್ಯ ಮಾನ್ಯರು, ಜನಪ್ರತಿನಿಧಿಗಳು ಹಾಗೂ ಮಾಧ್ಯಮದವರಿಗೆ ಆಸನದ ವ್ಯವಸ್ಥೆಯನ್ನು ಪರಿಶೀಲಿಸಿದರು.
ಮಳೆಯಾದಲ್ಲಿ ಪೂರ್ವಭಾವಿ ಸಿದ್ದತಾ ಕ್ರಮ ಜರುಗಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕರು ಉತ್ಸವಕ್ಕೆ ಬಹುತೇಕ ಎಲ್ಲ ಸಿದ್ದತೆ ಪೂರ್ಣಗೊಂಡಿದೆ ನಾಳೆ ಬೆಳಿಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಸಂಜೆ ಮುಖ್ಯ ವೇದಿಕೆಯಲ್ಲಿ ಉದ್ಘಾಟನಾ ಸಮಾರಂಭ ನೆರವೇರಲಿದೆ ಈ ಮೂರು ದಿನವೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುತ್ತಿವೆ. ಅದಲ್ಲದೇ ಕ್ರೀಡಾ ಕಾರ್ಯಕ್ರಮ ಮಹಿಳೆಯರಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.