
ಬೆಂಗಳೂರು, ಡಿಸೆಂಬರ್ 02 : ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನಲೆಯಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಫೆಂಗಲ್ ಚಂಡಮಾರುತದ ಪರಿಣಾಮ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಅವಾಂತರಗಳೇ ಸೃಷ್ಟಿಯಾಗಿದ್ದು, ಮುಂಜಾಗ್ರಾತಾ ಕ್ರಮವಾಗಿ ನಾಳೆ ಅಂದರೆ ಡಿಸೆಂಬರ್ 03, ಮಂಗಳವಾರದಂದು ರಾಜ್ಯದ 7 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಮೈಸೂರು, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ, ಚಿಕ್ಕಮಗಳೂರು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳ ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.
ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಾಳೆ ಕೊಡಗು ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.
ನಾಳೆಯೂ(ಡಿಸೆಂಬರ್ 3) ಸಹ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆಯು ನಾಳೆ ರೆಡ್ ಘೋಷಣೆ ಮಾಡಿದೆ. ಜಿಲ್ಲಾದ್ಯಂತ ತುಂತುರು ಮಳೆಯಾಗುತ್ತಿದ್ದು, ನಾಳೆಯೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ