Home ಕ್ರೀಡೆ ಬೆಳಗಾವಿ ಜಿಲ್ಲೆಯ ಸ್ಕೌಟ್ಸ್ ಮತ್ತು ಗೈಡ್ಸ್ಗೆ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ

ಬೆಳಗಾವಿ ಜಿಲ್ಲೆಯ ಸ್ಕೌಟ್ಸ್ ಮತ್ತು ಗೈಡ್ಸ್ಗೆ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ

0
ಬೆಳಗಾವಿ ಜಿಲ್ಲೆಯ ಸ್ಕೌಟ್ಸ್ ಮತ್ತು ಗೈಡ್ಸ್ಗೆ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ

ಬೆಳಗಾವಿ, ಡಿಸೆಂಬರ್ 19: ಮಂಗಳೂರಿನ ಪಿಲಿಕುಳ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರದಲ್ಲಿ ಇತ್ತೀಚೆಗೆ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ 2023-24ನೇ ಸಾಲಿನ 106ನೇ ರಾಜ್ಯ ಪರಿಷತ್ ಸಭೆಯಲ್ಲಿ, ಬೆಳಗಾವಿ ಜಿಲ್ಲೆಯ ಸ್ಕೌಟ್ಸ್ ಮತ್ತು ಗೈಡ್ಸ್ಗೆ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಲಭಿಸಿದೆ.

ಅಬ್ದುಲ್ ಗಫಾರ್ ಪರ್ಯಾಯ ಫಲಕ ಹಾಗೂ ಪ್ರಮಾಣಪತ್ರವನ್ನು ಸಭೆಯ ಅಧ್ಯಕ್ಷರಾದ ಆಶಾ ಪ್ರಸನ್ ಕುಮಾರ, ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್. ಸಿಂಧ್ಯಾ, ರಾಜ್ಯ ಸ್ಕೌಟ್ ಆಯುಕ್ತರಾದ ಎಂ.ಎ. ಖಾಲಿದ, ಗೈಡ್ ಆಯುಕ್ತರಾದ ಗೀತಾ ನಟರಾಜ, ರಾಜ್ಯ ಸಂಸ್ಥೆಯ ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ ಪ್ರದಾನ ಮಾಡಲಾಯಿತು.

ಪ್ರಶಸ್ತಿಯನ್ನು ಸ್ವೀಕರಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಉಪಾಧ್ಯಕ್ಷರು ಹಾಗೂ ಬೆಳಗಾವಿ ಜಿಲ್ಲೆ ಮುಖ್ಯ ಆಯುಕ್ತರಾದ ಗಜಾನನ ಮನ್ನಿಕೇರಿ, ಈ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು.

ವಿಶೇಷವಾಗಿ, ಬೆಳಗಾವಿ ಹಾಗೂ ಶೈ.ಜಿ. ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿಆರ್ಸಿ/ಸಿಆರ್ಸಿ ಅಧಿಕಾರಿಗಳು, ಜಿಲ್ಲಾ/ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳು, ಹಾಗೂ ಕಬ್, ಬುಲ್‌ಬುಲ್, ಸ್ಕೌಟ್ಸ್, ಗೈಡ್ಸ್, ರೋವರ್-ರೇಂಜರ್ ಮಕ್ಕಳು ಹಾಗೂ ದಳ ನಾಯಕರುಗೆ ಪ್ರಶಸ್ತಿಯ ಯಶಸ್ಸಿನ ಮೇಲೆ ಕೃತಜ್ಞತೆ ತಿಳಿಸಿದರು.

ಜಿಲ್ಲಾ ಮುಖ್ಯ ಆಯುಕ್ತರು ಮಾತನಾಡುತ್ತಾ, ಸ್ಕೌಟ್ಸ್ ಮತ್ತು ಗೈಡ್ಸ್ ಚಳುವಳಿ ಮಕ್ಕಳಲ್ಲಿ ಶಿಸ್ತು, ಪ್ರಾಮಾಣಿಕತೆ, ಸಾಮಾಜಿಕ ಹೊಣೆಗಾರಿಕೆ, ರಾಷ್ಟ್ರೀಯ ಸದ್ಭಾವನೆ, ಹಾಗೂ ಪರಿಸರ ಪ್ರೀತಿಯಂತಹ ಮಾನವೀಯ ಮೌಲ್ಯಗಳನ್ನು ಬೆಳೆಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವುದನ್ನು ಹೈಲೈಟ್ ಮಾಡಿದರು.

ಅವರು, ಪಾಲಕರು ಮಕ್ಕಳನ್ನು ಸ್ಕೌಟ್-ಗೈಡ್ಸ್ ಚಟುವಟಿಕೆಯಲ್ಲಿ ಭಾಗವಹಿಸಲು ಪ್ರೇರೇಪಿಸಬೇಕೆಂದು ಕೋರಿದರು.

ಅಭಿನಂದನೆಗಳು: ಕಿತ್ತೂರ ಕ್ಷೇತ್ರಶಿಕ್ಷಣಾಧಿಕಾರಿಗಳಾದ ಸಿ.ವೈ. ತುಬಾಕದ ಹಾಗೂ ಸ್ಕೌಟ್ ನೂಡಲ್ ಕಿತ್ತೂರ ಡಿ.ಎಚ್. ಪಾಟೀಲ ಅವರು ಬೆಳಗಾವಿ ಜಿಲ್ಲೆ ಸಾದಿಸಿದ ಯಶಸ್ಸಿಗೆ ತಮ್ಮ ಅಭಿನಂದನೆಗಳನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here