
ಹಾವೇರಿ, ನವೆಂಬರ್ 21: ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) (Manohar Tahsildar) ನಿಧನರಾಗಿದ್ದಾರೆ.
ಬುಧವಾರ (ನ.20)ರ ಮಧ್ಯರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ. ಮನೋಹರ್ ತಹಶಿಲ್ದಾರ ನಾಲ್ಕು ಜನ ಪುತ್ರರು ಇಬ್ಬರು ಪುತ್ರಿಯರು ಇದ್ದಾರೆ.
ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶಿಲ್ದಾರ ಅವರು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳಲ್ಲಿ ಸೇವೆ ಸಲ್ಲಿಸಿದ್ದ ಅವರು ರಾಜಕೀಯದಲ್ಲಿ ಸಕ್ರಿಯ ಪಾತ್ರ ವಹಿಸಿದ್ದರು. ಅವರ ಅಂತ್ಯಕ್ರಿಯೆ ಇಂದು (ಶುಕ್ರವಾರ) ಅವರ ಹುಟ್ಟೂರಾದ ಅಕ್ಕಿವಳ್ಳಿಯಲ್ಲಿ ನಡೆಯಲಿದೆ.