Home ಕರ್ನಾಟಕ ರಣಭೀಕರ ವರುಣಾಬ್ಬರಕ್ಕೆ ರಾಜಧಾನಿ ತತ್ತರ! ನಾಳೆ ಸಿಲಿಕಾನ್ ಸಿಟಿ ಶಾಲೆಗಳಿಗೆ ರಜೆ ಘೋಷಣೆ

ರಣಭೀಕರ ವರುಣಾಬ್ಬರಕ್ಕೆ ರಾಜಧಾನಿ ತತ್ತರ! ನಾಳೆ ಸಿಲಿಕಾನ್ ಸಿಟಿ ಶಾಲೆಗಳಿಗೆ ರಜೆ ಘೋಷಣೆ

0
ರಣಭೀಕರ ವರುಣಾಬ್ಬರಕ್ಕೆ ರಾಜಧಾನಿ ತತ್ತರ! ನಾಳೆ ಸಿಲಿಕಾನ್ ಸಿಟಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು, ಅಕ್ಟೋಬರ್ 15 : ಭಾರೀ ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಲಾ ಕಾಲೇಜುಗಳ ಕುರಿತು ಮಹತ್ವದ ಆದೇಶ ಹೊರಡಿಸಲಾಗಿದ್ದು, ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಿಸುವ ಕುರಿತು ಡಿಸಿ ಜಗದೀಶ್ ಅವರು ಮಾಹಿತಿ ನೀಡಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರ್ನಾಟಕದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ. ಬೆಂಗಳೂರಿನಲ್ಲಿ 2 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ವರುಣನ ಆರ್ಭಟ ಇನ್ನೂ ಮೂರು ದಿನ ರಾಜ್ಯದಲ್ಲಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ನಾಳೆ ಅಂದರೆ ಅಕ್ಟೋಬರ್ 16ರಂದು ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಜಗದೀಶ್ ಸೂಚಿಸಿದ್ದಾರೆ.ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅಕ್ಟೋಬರ್ 20 ರವರೆಗೆ ದಸರಾ ರಜೆ ಇದೆ. ಆದ್ರೆ ಖಾಸಗಿ ಶಾಲೆಗಳು ಶಾಲೆ ಆರಂಭ ಮಾಡಿವೆ. ಸೋಮುವಾರದಿಂದಲೆ ಖಾಸಗಿ ಶಾಲೆಗಳು ಪುನರಾರಂಭವಾಗಿವೆ.

LEAVE A REPLY

Please enter your comment!
Please enter your name here