Home COVID|HMPV “ರಾಜ್ಯದಲ್ಲಿ HMPV TEST ಕಡ್ಡಾಯವಲ್ಲ” ಆತಂಕಕಾರಿ VIRUS ಬಗ್ಗೆ ಆರೋಗ್ಯ ಇಲಾಖೆ ಹೇಳಿದ್ದೇನು?

“ರಾಜ್ಯದಲ್ಲಿ HMPV TEST ಕಡ್ಡಾಯವಲ್ಲ” ಆತಂಕಕಾರಿ VIRUS ಬಗ್ಗೆ ಆರೋಗ್ಯ ಇಲಾಖೆ ಹೇಳಿದ್ದೇನು?

0
“ರಾಜ್ಯದಲ್ಲಿ HMPV TEST ಕಡ್ಡಾಯವಲ್ಲ” ಆತಂಕಕಾರಿ VIRUS ಬಗ್ಗೆ ಆರೋಗ್ಯ ಇಲಾಖೆ ಹೇಳಿದ್ದೇನು?

ಬೆಂಗಳೂರು, ಜನವರಿ 8: ಕರ್ನಾಟಕದಲ್ಲಿ ಎಚ್​ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ ಎಂದು ಆರೋಗ್ಯ ಇಲಾಖೆ ಆಸ್ಪತ್ರೆಗೆ ಹೋಗುವವರಿಗೆ ಸೂಚನೆ ನೀಡಿದೆ. ಜತೆಗೆ, ಖಾಸಗಿ ಲ್ಯಾಬ್ ಹಾಗೂ ಖಾಸಗಿ ಆಸ್ಪತ್ರೆಗಳ ಮೇಲೆ ಇಲಾಖೆ ನಿಗಾ ಇಡುವುದಾಗಿ ತಿಳಿಸಿದೆ.

ಎಚ್​ಎಂಪಿವಿ ವೈರಸ್ ಟೆಸ್ಟ್ ಮಾಡಿಸಿಕೊಳ್ಳಿ ಎನ್ನುವವರ ಮೇಲೆ ಹದ್ದಿನ ಕಣ್ಣು ಇಡಲು ನಿರ್ಧರಿಸಿದೆ. ಜ್ವರ, ಕೆಮ್ಮು ಎಂದು ಆಸ್ಪತ್ರೆಗೆ ಹೋಗುವವರು ಎಚ್​ಎಂಪಿವಿ ವೈರಸ್ ಟೆಸ್ಟ್ ಮಾಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಇಲಾಖೆ ಹೇಳಿದೆ.

ಈ ವಿಚಾರವಾಗಿ ಇಂದು (ಬುಧವಾರ) ಸಂಜೆಯೊಳಗೆ ಆರೋಗ್ಯ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಲಿದೆ ಎಂದು ಮೂಲಗಳು ತಿಳಿಸಿವೆ.ಎಚ್​ಎಂಪಿವಿ ವೈರಸ್ ಟೆಸ್ಟ್​ಗೆ 10 ಸಾವಿರದಿಂದ 12 ಸಾವಿರ ರೂ!ಖಾಸಗಿ ಆಸ್ಪತ್ರೆಗಳಲ್ಲಿ ಎಚ್​ಎಂಪಿವಿ ವೈರಸ್ ಟೆಸ್ಟ್​ಗೆ 10 ಸಾವಿರ ರೂ.ನಿಂದ 12 ಸಾವಿರ ರೂ. ದರ ಇದೆ. ಹೀಗಾಗಿ ಟೆಸ್ಟಿಂಗ್ ಅಗತ್ಯ ಇಲ್ಲ ಎಂದು ಇಲಾಖೆ ಪ್ರಕಟಣೆ ಹೊರಡಿಸಲಿದೆ ಎಂದು ಮೂಲಗಳು ಹೇಳಿವೆ.

LEAVE A REPLY

Please enter your comment!
Please enter your name here