Home ಬ್ರೇಕಿಂಗ್ ನ್ಯೂಸ್ ವಯನಾಡು ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ!

ವಯನಾಡು ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ!

0
ವಯನಾಡು ಸಂಸದೆಯಾಗಿ  ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ!

ನವದೆಹಲಿ, ನವೆಂಬರ್ 28: ಕೇರಳದ ವಯನಾಡು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದು ಪ್ರಿಯಾಂಕಾ ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದು, ಪ್ರಿಯಾಂಕಾ ಅವರಿಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಪ್ರಮಾಣ ವಚನ ಬೋಧಿಸಿದರು.

ಇದೇ ವೇಳೆ ನಾಂದೇಡ್‌ ಉಪಚುನಾವಣೆಯಲ್ಲಿ ಗೆದ್ದಿರುವ ರವೀಂದ್ರ ಚವಾಣ್‌ (ಕಾಂಗ್ರೆಸ್‌) ಕೂಡ ದೇವರ ಹೆಸರಿನಲ್ಲಿ ಮರಾಠಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಇತ್ತೀಚೆಗೆ ಅವರ ತಂದೆ ವಸಂತರಾವ್‌ ಚವಾಣ್‌ ಅವರ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿತ್ತು.ಪ್ರಿಯಾಂಕಾ ಗಾಂಧಿ 2019 ರಲ್ಲಿ ಸಕ್ರಿಯ ರಾಜಕೀಯಕ್ಕೆ ಧುಮುಕಿದರು ಮತ್ತು ನಂತರ ಕಾಂಗ್ರೆಸ್‌‍ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡರು. ಐದು ವರ್ಷಗಳ ನಂತರ, ಪ್ರಿಯಾಂಕಾ ಗಾಂಧಿ ಅವರು ಚುನಾಯಿತ ಜನಪ್ರತಿನಿಧಿಯಾಗಿ ತಮ ಪ್ರಯಾಣವನ್ನು ಪ್ರಾರಂಭಿಸಿದ್ದಾರೆ.

ರೆ.

LEAVE A REPLY

Please enter your comment!
Please enter your name here