Home ಕರ್ನಾಟಕ ವರ್ಷದ ಆರಂಭದಲ್ಲಿ ರಾಜ್ಯದಲ್ಲಿ ದುರಂತ! ಭಯಂಕರ ರಸ್ತೆ ಅಪಘಾತ; 14 ದಾರುಣ ಮರಣ!

ವರ್ಷದ ಆರಂಭದಲ್ಲಿ ರಾಜ್ಯದಲ್ಲಿ ದುರಂತ! ಭಯಂಕರ ರಸ್ತೆ ಅಪಘಾತ; 14 ದಾರುಣ ಮರಣ!

0
ವರ್ಷದ ಆರಂಭದಲ್ಲಿ ರಾಜ್ಯದಲ್ಲಿ ದುರಂತ! ಭಯಂಕರ ರಸ್ತೆ ಅಪಘಾತ; 14 ದಾರುಣ ಮರಣ!

ಯಲ್ಲಾಪುರ :ಹಣ್ಣು, ತರಕಾರಿ ತುಂಬಿಕೊಂಡು ವ್ಯಾಪಾರಸ್ಥರೊಂದಿಗೆ ಸಂತೆಗೆ ತೆರಳುತ್ತಿದ್ದ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದು 10 ಮಂದಿ ಸಾವನ್ನಪ್ಪಿರುವ ಘಟನೆ ಯಲ್ಲಾಪುರದ ಅರಬೈಲ್ ಘಟ್ಟದ ಕಾಗೇರಿ ಪೆಟ್ರೋಲ್ ಬಂಕ್ ಬಳಿ ಬುಧವಾರ ಮುಂಜಾನೆ ಸಂಭವಿಸಿತ್ತು.

ಮೃತರೆಲ್ಲರೂ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದವರು. ಸವಣೂರಿನಿಂದ ಕುಮಟಾದ ಸಂತೆಗೆ ತೆರಳುತ್ತಿದ್ದ ಲಾರಿಯಲ್ಲಿ ಸುಮಾರು 40ಕ್ಕೂ ಹೆಚ್ಚು ವ್ಯಾಪಾರಸ್ಥರು ತರಕಾರಿಗಳನ್ನು ತುಂಬಿಕೊಂಡು ತೆರಳುತ್ತಿದ್ದರು.

ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ.ಇನ್ನೊಂದೆಡೆ, ಆಂಧ್ರ ಪ್ರದೇಶದ ಮಂತ್ರಾಲಯ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಹಾಗೂ ಚಾಲಕ ಸಾವನ್ನಪ್ಪಿರುವ ಘಟನೆ ಸಿಂಧನೂರು ಹೊರವಲಯದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. 14 ಜನ ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನದ ಆಕ್ಸಲ್ ಕಟ್ ಆಗಿ ಪಲ್ಟಿಯಾಗಿದೆ. ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಯ ನರಹರಿ ತೀರ್ಥರ ವೃಂದಾವನಕ್ಕೆ ತೆರಳುವಾಗ ಈ ಅಪಘಾತ ಸಂಭವಿಸಿದೆ.

ಸಿಎಂ ಮತ್ತು ಪಿಎಂ ಮೃತರ ಕುಟುಂಬಕ್ಕೆ ಪರಿಹಾರವನ್ನು ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here