Home ಕರ್ನಾಟಕ ಉಪಕದನದ ಫಲಿತಾಂಶ ‘ಕೈ’ ನಾಯಕತ್ವಕ್ಕೆ ಮತ್ತಷ್ಟು ಬಲ: ಹೆಬ್ಬಾಳ್ಕರ್

ಉಪಕದನದ ಫಲಿತಾಂಶ ‘ಕೈ’ ನಾಯಕತ್ವಕ್ಕೆ ಮತ್ತಷ್ಟು ಬಲ: ಹೆಬ್ಬಾಳ್ಕರ್

0
ಉಪಕದನದ ಫಲಿತಾಂಶ ‘ಕೈ’ ನಾಯಕತ್ವಕ್ಕೆ ಮತ್ತಷ್ಟು ಬಲ: ಹೆಬ್ಬಾಳ್ಕರ್

ಬೆಂಗಳೂರು, ನವೆಂಬರ್ 23: ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹರ್ಷ ವ್ಯಕ್ತಪಡಿಸಿದ್ದಾರೆ.

ಪಂಚ ಗ್ಯಾರಂಟಿ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎಂದು ಈ ಫಲಿತಾಂಶ ತೋರುತ್ತದೆ ಎಂದು ಸಚಿವರು ಹೇಳಿದ್ದಾರೆ.ಉಪಚುನಾವಣೆ ಫಲಿತಾಂಶದ ಮೂಲಕ ಮೂರು ಕ್ಷೇತ್ರಗಳ ಮತದಾರರು ವಿಪಕ್ಷಗಳಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ.

ಉಪ ಚುನಾವಣಾ ಫಲಿತಾಂಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈ ಮತ್ತಷ್ಟು ಬಲಗೊಂಡಿದ್ದು,‌ ಈ ಫಲಿತಾಂಶದಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here