
ಬೆಳಗಾವಿ, ಡಿಸೆಂಬರ್ 01: ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಿರಿಯ ಕೆಎಎಸ್ ಅಧಿಕಾರಿ ಅಶೋಕ ದುಡಗುಂಟಿ ಅವರನ್ನು ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.ಇತ್ತೀಚೆಗೆ ಮಹಾನಗರ ಪಾಲಿಕೆ ಆಯುಕ್ತರ ಹುದ್ದೆಗೆ ಶುಭಾ ಬಿ. ಅವರನ್ನು ನೇಮಕ ಮಾಡಲಾಗಿತ್ತು. ಸ್ಥಳ ನಿರೀಕ್ಷಣೆಯಲ್ಲಿದ್ದ ಅಶೋಕ ದುಡಗುಂಟಿ ಅವರನ್ನು ಸರ್ಕಾರ ಇದೀಗ ರೇಣುಕಾ ದೇವಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿ ಸ್ಥಳ ನಿಯೋಜನೆ ಮಾಡಿದೆ.