
ತಿರುಪತಿ, ಜನವರಿ 09: ಆಂಧ್ರ ಪ್ರದೇಶದ ತಿರುಪತಿಯಲ್ಲಿ ಜನವರಿ 8ರಂದು ಬುಧವಾರ ನಡೆದ ಭೀಕರ ಕಾಲ್ತುಳಿತ ಪ್ರಕರಣದಲ್ಲಿ ಸಾವಿಗೀಡಾದವರಿಗೆ ರಾಜ್ಯ ಸರ್ಕಾರದ ಮುಜುರಾಯಿ ಇಲಾಖೆ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ತಿರುಪತಿಯಲ್ಲಿ ಮೊದಲ ಬಾರಿಗೆ ವ್ಯಾಪಕ ಕಾಲ್ತುಳಿತ ಸಂಭವಿಸಿ ಕರ್ನಾಟಕದ ಮೂಲದ ಓರ್ವ ಮಹಿಳೆ ಸೇರಿದಂತೆ ಬರೊಬ್ಬರಿ 6 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ವೈಕುಂಠ ದ್ವಾರ ದರ್ಶನ ಟೋಕನ್ ವಿತರಣಾ ಕೇಂದ್ರಗಳಲ್ಲಿ ಕಾಲ್ತುಳಿತ ಸಂಭವಿಸಿದ್ದು, ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ.
ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಭೇಟಿಇನ್ನು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಡಿಸಿಎಂ ಪವನ್ ಕಲ್ಯಾಣ್ ಅವರು ಗುರುವಾರ ತಿರುಪತಿಗೆ ಭೇಟಿ ನೀಡಲಿದ್ದು, ಘಟನಾ ಸ್ಥಳದ ಪರಿಶೀಲನೆ ಹಾಗೂ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ. ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಡಿಸಿಎಂ ಪವನ್ ಕಲ್ಯಾಣ್ ಅವರು ಗುರುವಾರ ತಿರುಪತಿಗೆ ಭೇಟಿ ನೀಡಲಿದ್ದಾರೆ.
ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಿರುವ ಚಂದ್ರಬಾಬು ನಾಯ್ಡು, ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಲಿದ್ದಾರೆ. ಜೊತೆಗೆ ಸಾವಿಗೀಡಾದವರ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ